Date: 18 Jan 2025 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಜ್ಯೋತಿಷ್ಯ » ಆಧ್ಯಾತ್ಮಿಕ

ಶಂಕರಾಚಾರ್ಯರ ಪೀಠಗಳ ವಿವರ ಮತ್ತು ದಶನಾಮೀ ಪದ್ಧತಿಗಳು


28 Jul 2020

ಆಮ್ನಾಯ ಪೀಠಗಳ ವಿವರ :

  • ಗೋವರ್ಧನ ಪೀಠ: ಹಸ್ತಾಮಲಕಾಚಾರ್ಯರು–ಮಹಾವಾಕ್ಯ–ಪ್ರಜ್ಞಾನಂ ಬ್ರಹ್ಮ–ಋಗ್ವೇದ–ಐತ್ತರೇಯ ಉಪನಿಷತ್–ಭೋಗವಾಲ ಸಂಪ್ರದಾಯ
  • ಶಾರದಾ ಪೀಠ: ಸುರೇಶ್ವರಾಚಾರ್ಯರು–ಮಹಾವಾಕ್ಯ–ಅಹಂ ಬ್ರಹ್ಮಾಸ್ಮಿ–ಯಜುರ್ವೇದ–ಬ್ರಹದಾರಣ್ಯಕ ಉಪ.–ಭೂರಿವಾಲ ಸಂಪ್ರದಾಯ

  • ದ್ವಾರಕಾ ಪೀಠ : ಪದ್ಮಪಾದಾಚಾರ್ಯರು–ಮಹಾವಾಕ್ಯ–ತತ್ವಮಸೀ–ಸಾಮವೇದ–ಛಾಂದೋಗ್ಯ ಉಪನಿಷತ್–ಕೀಟವಾಲ ಸಂಪ್ರದಾಯ

  • ಜ್ಯೋತಿರ್ಮಠ : ತೋಟಕಾಚಾರ್ಯರು–ಮಹಾವಾಕ್ಯ–ಅಯಮಾತ್ಮಾ ಬ್ರಹ್ಮ–ಅಥರ್ವ ವೇದ– ಮಾಂಡೂಕ್ಯ ಉಪ.–ನಂದವಾಲ ಸಂಪ್ರದಾಯ

  •  

    ದಶನಾಮೀ ಪದ್ಧತಿ : ಶಂಕರಾಚಾರ್ಯರು ಏಕದಂಡಿ ಸಂಪ್ರದಾಯವನ್ನು ಪ್ರಾರಂಭಿಸಿದರು. ಈ ಸಂಪ್ರದಾಯದ ಸಂನ್ಯಾಸಿಗಳು ತಮ್ಮ ಹೆಸರಿನ ಮುಂದೆ ದಶನಾಮಗಳಲ್ಲಿ ಒಂದನ್ನು ಇಟ್ಟುಕೊಳ್ಳುತ್ತಾರೆ.

ಅವು ಯಾವುವೆಂದರೆ ಸರಸ್ವತಿ, ತೀರ್ಥ, ಅರಣ್ಯ, ಭಾರತೀ, ಆಶ್ರಮ, ಗಿರಿ, ಪರ್ವತ, ಸಾಗರ, ವನ ಮತ್ತು ಪುರಿ. ಸರಸ್ವತಿ, ಭಾರತಿ ಮತ್ತು ಪುರಿ ಉಪನಾಮಗಳು ಶೃಂಗೇರಿ ಮಠಕ್ಕೆ ಸೇರಿವೆ. ತೀರ್ಥ, ಆಶ್ರಮ ನಾಮಗಳು ದ್ವಾರಕಾ ಪೀಠಕ್ಕೆ ಸೇರಿವೆ. ಗಿರಿ, ಪರ್ವತ, ಸಾಗರ ಜ್ಯೋತಿರ್ಮಠಕ್ಕೆ ಸೇರಿವೆ. ಉಳಿದವು ಸ್ವತಂತ್ರ ಸಂಪ್ರದಾಯ ಹೊಂದಿವೆ. ಆದರೂ ಇದು ಅಷ್ಟೇನೂ ಬಿಗಿಯಾದ ನಿಯಮವಿದ್ದಂತೆ ಕಾಣುವುದಿಲ್ಲ. ಕಾರಣ ಅರಣ್ಯನಾಮದ ವಿದ್ಯಾರಣ್ಯರು ಶೃಂಗೇರಿ ಮಠದ ಪೀಠಾಧಿಪತಿಗಳಾಗಿದ್ದರು.

ಷಣ್ಮತ ಸ್ಥಾಪನ: ಸೂರ್ಯ, ಗಣಪತಿ, ಅಂಬಿಕಾ, ಶಿವ, ವಿಷ್ಣು ಮತ್ತು ಸ್ಕಂದ ಈ ದೇವರುಗಳ ಆರಾಧಕರು ಪರಸ್ಪರ ತಾವು ಮೇಲು, ತಾವು ಮೇಲೆಂದು ಜಗಳವಾಡುತ್ತಿದ್ದುದನ್ನು ನಿಲ್ಲಿಸಿ, ಅವೆಲ್ಲವೂ ಒಬ್ಬನೇ ಈಶ್ವರನ ಬೇರೆ ಬೇರೆ ರೂಪಗಳೆಂದು ಆರಾಧಕರನ್ನು ಒಪ್ಪಿಸಿ, ಈ ಆರೂ ದೇವತೆಗಳನ್ನು ಪರಸ್ಪರ ವಿರೋಧವಿಲ್ಲದೆ ಪೂಜಿಸಬೇಕೆಂದು ನಿಯಮವನ್ನು ಮಾಡಿದರು. ತಾವು ಉಪಾಸನೆ ಮಾಡುವ ದೇವತೆಯನ್ನು ಮಧ್ಯೆ ಇಟ್ಟು ಉಳಿದ ದೇವತೆಗಳನ್ನು ಅದರ ಸುತ್ತಾ ಇಟ್ಟು, ಅದನ್ನು ಮುಖ್ಯ ದೇವತೆಯ ಪರಿವಾರವೆಂದು ಪೂಜಿಸಲು ಹೇಳಿದರು. ಈ ಪದ್ಧತಿ ಅಂದಿನಿಂದ ಶುರುವಾಯಿತು. ಈ ಕಾರಣದಿಂದ ಶಂಕರರಿಗೆ ಷಣ್ಮತಸ್ಥಾಪಕರೆಂದು ಹೆಸರಾಯಿತು.

ನಿರಾಕಾರ ಪರಬ್ರಹ್ಮ ಸಾಕ್ಷಾತ್ಕಾರಕ್ಕೆ ಇರುವ ಮಾರ್ಗಗಳಲ್ಲಿ ಶ್ರೀಚಕ್ರ ಉಪಾಸನೆಯೂ ಒಂದು. ಶಂಕರರ ಕಾಲದಲ್ಲಿ ಶ್ರೀ ಚಕ್ರ ಪೂಜೆಯು ಉಗ್ರಶಕ್ತಿಯ ಉಪಾಸನೆಯಾಗಿತ್ತು. ಶಂಕರರು ತಮ್ಮ ಅದ್ವೈತ ಸಿದ್ಧಾಂತದ ಸ್ಥಾಪನೆಯನ್ನು ಮಾಡಬೇಕಿತ್ತು. ಅದ್ವೈತ ಸಿದ್ಧಾಂತದ ಸ್ಥಾಪನೆಯ ಹಿನ್ನೆಲೆಯಲ್ಲಿ ನಿರಾಕಾರ ಪರತತ್ವದ ಸ್ಥಾಪನೆ, ಪ್ರತಿಮಾ ಪೂಜೆಗಳಿಂದ ಹೊರತಾದ ಪರಬ್ರಹ್ಮದ ಅರ್ಚನೆಯಾಗಬೇಕಿತ್ತು. ಆದರೆ ಸಾಮಾನ್ಯ ಜನರಿಗೆ ಆಕಾರಸಹಿತವಾಗಿರುವ ದೇವ-ದೇವಿಯರನ್ನು ಪೂಜಿಸಿಯೇ ರೂಢಿ. ಈ ಹಿನ್ನೆಲೆಯಲ್ಲಿ ಆಕಾರಸಹಿತವಾದ ಪ್ರತಿಮೆ, ನಿರಾಕಾರವಾಗಿರುವ ಪರಬ್ರಹ್ಮ ಎರಡರ ಮಧ್ಯದಲ್ಲಿ ಒಂದು ಸಾಧನ ಬೇಕಿತ್ತು. ಅದಕ್ಕಾಗಿ ಶಂಕರರು ಶ್ರೀ ಚಕ್ರವನ್ನು ಆಯ್ಕೆ ಮಾಡಿಕೊಂಡರು. ಆದರೆ ಭಂಡಾಸುರನ ವಧೆಯ ಕಾರಣವಾಗಿ ಉಗ್ರಶಕ್ತಿ ಸೋಪಾನವಾಗಿದ್ದ ಶ್ರೀ ಚಕ್ರವನ್ನು ಯಥಾಸ್ಥಿತಿಯಲ್ಲಿ ಉಪಾಸನೆ ಜನಸಾಮಾನ್ಯರಿಗೆ ಸಾಧ್ಯವಿರಲಿಲ್ಲ. ಶ್ರೀಚಕ್ರವಿದ್ದಲ್ಲಿಗೆ ಹೋಗಿ ಶ್ರೀಚಕ್ರವನ್ನು ಪರಿಷ್ಕರಿಸಿ ಸಾತ್ವಿಕರೂಪವು ಉಗಮಿಸುವಂತೆ ಸಾತ್ವಿಕ ಶ್ರೀಚಕ್ರ ಸ್ಥಾಪನೆ ಮಾಡಬೇಕು.

ಅದು ಸಾಧ್ಯವಾದರೆ, ಆ ಶ್ರೀಚಕ್ರಾರ್ಚನೆ ಮೂಲಕ ಪ್ರತಿಮಾ ಪೂಜೆಯನ್ನು ಮೀರಿ ನಿರಾಕಾರ ಪರಬ್ರಹ್ಮದ ಕಡೆಗೆ ಹೋಗುವ ಪಥದಲ್ಲಿ ಒಂದು ಸಾಧನವನ್ನು ಸ್ಥಾಪನೆ ಮಾಡಿದಂತಾಗುತ್ತದೆ. ಉಗ್ರಶಕ್ತಿಯ ಶ್ರೀಚಕ್ರಗಳಿದ್ದ ದೇವಾಲಯಗಳ ಪೈಕಿ ಅತೀ ಉಗ್ರ ಶ್ರೀಚಕ್ರ ಇದ್ದದ್ದು ಮಧುರೆಯ ಮೀನಾಕ್ಷೀ ದೇವಾಲಯದಲ್ಲಿ. ಶ್ರೀಚಕ್ರವನ್ನು ಸಾತ್ವಿಕವಾಗಿ ಪರಿಷ್ಕರಿಸಲು ಶಂಕರಾಚಾರ್ಯರು ಮಧುರೆಯ ಮೀನಾಕ್ಷೀ ದೇವಾಲಯವನ್ನೇ ಆಯ್ಕೆಮಾಡಿಕೊಂಡರು. ಸಂಖ್ಯಾಶಾಸ್ತ್ರ, ಅಕ್ಷರಶಾಸ್ತ್ರದ ಅನುಗುಣವಾಗಿ ಘೋರಮಂತ್ರಗಳನ್ನು (ಘೋರಾಕ್ಷರ) ತೆಗೆದು, ತ್ರಿಕೋನಗಳ ಸಹಿತ ಸಾತ್ವಿಕ ಅಕ್ಷರಗಳನ್ನು ರಚಿಸಿ, ಸಾತ್ವಿಕ ಬೀಜಾಕ್ಷರಗಳ ಅಳವಡಿಕೆಯಿಂದ ಶ್ರೀಚಕ್ರದ ಪರಾಶಕ್ತಿಯ ಚಟುವಟಿಕೆಯನ್ನು ನಿಗ್ರಹಿಸಿದರು. ಸಾತ್ವಿಕ ಶ್ರೀಚಕ್ರಸೃಷ್ಟಿ ಆದುದು ಹೀಗೆ.

ಶಂಕರಾಚಾರ್ಯರು ಎಲ್ಲಾ ದೇವ-ದೇವಿಯರ ಮೇಲೂ ಛಂದೋಬದ್ಧವಾದ, ಆರ್ಥಗರ್ಭಿತವಾದ, ಮನೋಹರವಾದ, ಭಕ್ತಿಯಿಂದ ಸ್ತುತಿಸಿದರೆ ಇಷ್ಟಾರ್ಥವನ್ನು ಕೈಗೂಡಿಸುವಂತಹ ಅಸಂಖ್ಯ ಸ್ತೋತ್ರಗಳನ್ನು ರಚಿಸಿದ್ದಾರೆ. ಏಕಶ್ಲೋಕಿಯಿಂದ ಹಿಡಿದು ದಶ ಶ್ಲೋಕಿ, ಶತಶ್ಲೋಕಿ, 580 ಶ್ಲೋಕಗಳಿರುವ ವಿವೇಕ ಚೂಡಾಮಣಿ, ಉಪದೇಶ ಸಾಹಸ್ರೀವರೆಗೂ ಇವರ ರಚನೆಗಳಿವೆ. ಚಿಕ್ಕವಯಸ್ಸಿನವರಿಗೆ ಸುಲಭವಾದ ರಚನೆಗಳಿದ್ದರೆ, ಪಂಡಿತರಿಗೆ ಅಷ್ಟೇ ಕ್ಲಿಷ್ಟವಾದ ರಚನೆಗಳೂ ಇವೆ.

ಮಾಹಿತಿ :
ಆಧ್ಯಾತಿಕ ಚಿಂತಕರು ಹಾಗೂ ಪುರೋಹಿತರು
ವೇದಬ್ರಹ್ಮ ಶ್ರೀ ಗಣೇಶ್ ಭಟ್ : ಮೊಬೈಲ್ : 9980010722, 9036239373

Share on:

City Information

(Private)