Date: 14 Nov 2024 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಜ್ಯೋತಿಷ್ಯ » ಆಧ್ಯಾತ್ಮಿಕ

ಲಲಿತಾ ಸಹಸ್ರನಾಮ ಪಠಿಸುವ ಉದ್ದೇಶ ಮತ್ತು ಲಲಿತಾದೇವಿಯ ಕಥೆ


09 Sep 2020

ಬ್ರಹ್ಮಾಂಡ ಪುರಾಣದಲ್ಲಿ ಹಯಗ್ರೀವ ಮುನಿಯು ಅಗಸ್ತ್ಯರಿಗೆ ಶ್ರೀಲಲಿತೋಪಾಖ್ಯಾನವನ್ನು ಹೇಳಿ, ಲಲಿತಾ ಸಹಸ್ರನಾಮದಿಂದ ಜಗನ್ಮಾತೆಯನ್ನು ಪ್ರಾರ್ಥಿಸುತ್ತಾರೆ.

ಲಲಿತಾಂಬೆಯ ಕಥೆ ಈ ರೀತಿ ಇದೆ :

ಶಿವನು ಮನ್ಮಥನನ್ನು ತನ್ನ ಮೂರನೆಯ ಕಣ್ಣಿನಿಂದ ಸುಟ್ಟು ಭಸ್ಮ ಮಾಡಿದನು, ಚಿತ್ರಕರ್ಮನು ಮನ್ಮಥನ ಬೂದಿಯನ್ನು ಒಟ್ಟುಗೂಡಿಸಿ ಪುರುಷಾಕೃತಿಯನ್ನು ನಿರ್ಮಾಣ ಮಾಡಿದನು. ಶಿವನ ದೃಷ್ಟಿ ಬಿದ್ದ ಕೂಡಲೇ ಆಕೃತಿಗೆ ಜೀವ ಬಂತು. ಚಿತ್ರಕರ್ಮನಿಂದ ಶತರುದ್ರ ಮಂತ್ರಾನುಷ್ಠಾನದ ಉಪದೇಶ ಪಡೆದು, ರುದ್ರನನ್ನು ಪೂಜಿಸಿ, ಅರವತ್ತು ಸಾವಿರ ವರ್ಷಗಳವರೆಗೆ ಚಕ್ರವರ್ತಿಯಾಗುವಂತೆ ವರ ಪಡೆದು ಭಂಡ ಎಂದು ಪ್ರಸಿದ್ಧನಾದನು.

ರುದ್ರನ ಕೆಂಗಣ್ಣಿನಿಂದ ಸೃಷ್ಟಿಯಾದ ಬೂದಿಯಿಂದ ಹುಟ್ಟಿದ ಭಂಡನು ರೌದ್ರ ಸ್ವಭಾವವನ್ನು ಹೊಂದಿದ್ದನು. ಶೋಣಿತಪುರದಲ್ಲಿ ರಾಜ್ಯವಾಳುತ್ತ ದೇವತೆಗಳಿಗೆ ಉಪಟಳ ನೀಡುತ್ತಿದ್ದನು. ನಾರದರ ಉಪದೇಶದಂತೆ ಇಂದ್ರನು ಸಮಸ್ತ ದೇವತೆಗಳೊಂದಿಗೆ ಹಿಮಗಿರಿಯ ತಪ್ಪಲಿಗೆ ಬಂದು ಭಾಗೀರಥೀ ತೀರದಲ್ಲಿ ಪರಾಶಕ್ತಿಯ ಪೂಜೆಯನ್ನು ಯಾಗ ವಿಧಾನದಿಂದ ಮಾಡಿದನು.

ಆ ಯಜ್ಞಕುಂಡದಿಂದ ಅನುಪಮ ತೇಜವಿರುವ ಚಕ್ರಾಕಾರವೊಂದು ಉದಿಸಿತು. ಚಕ್ರದ ಮಧ್ಯದಲ್ಲಿ ಸೂರ್ಯಪ್ರಭೆಯುಳ್ಳವಳು, ಬ್ರಹ್ಮ ವಿಷ್ಣು ಶಿವ ಸ್ವರೂಪಳೂ, ಸೌಂದರ್ಯಸಾರ ಸೀಮಾಂತಳೂ, ಆನಂದರಸ ಸಾಗರಳೂ, ಜಪಾಕುಸುಮದ ಕಾಂತಿಯುಳ್ಳವಳೂ, ದಾಳಿಂಬೆ ಹೂಬಣ್ಣದ ಸೀರೆಯನ್ನು ಉಟ್ಟವಳೂ, ಸರ್ವಾಭರಣಭೂಷಿತಳೂ, ಶೃಂಗಾರ ರಸಕ್ಕೆ ಆಲಯದಂತಿರುವವಳೂ, ಪಾಶ-ಕುಶ-ಇಕ್ಷು-ಕೋದಂಡ-ಪಂಚಬಾಣಗಳಿಂದ ಶೋಭಿಸುತ್ತಿರುವ ಕರಗಳುಳ್ಳವಳೂ ಆದ ಶ್ರೀ ಲಲಿತಾಂಬೆಯು ಅವತರಿಸಿದಳು.

ಲಲಿತಾ ಸಹಸ್ರನಾಮದ ಹಿನ್ನೆಲೆ

ಯ ಏಕೋsವರ್ಣೋಬಹುಧಾಶಕ್ತಿಯೋಗಾದ್ವರ್ಣಾನನೇಕಾನ್ಹನಿಹಿತಾರ್ಥೋ ದಧಾತಿ (ಶ್ವೇತಾಶ್ವತರೋಪನಿಷತ್),

ಪರತತ್ತ್ವಕ್ಕೆ ನಾಮರೂಪಗಳಾಗಲಿ ಇಲ್ಲ. ಹೀಗಿದ್ದರೂ ವರ್ಣರಹಿತವಾದ ಒಂದೇ ತತ್ತ್ವವು ಶಕ್ತಿಯೋಗದಿಂದ ವಿವಿಧ ವರ್ಣಗಳನ್ನುಂಟು ಮಾಡುತ್ತದೆ. ಇರುವ ಒಂದೇ ಶಕ್ತಿ ನಾನಾ ರೂಪನಾಮಗಳಿಂದ ಭಕ್ತರಿಂದ ಉಪಾಸ್ಯವಾಗಿರುವುದೇಕೆ?

ಯೇಯಥಾಮಾಂಪ್ರಪದ್ಯಂತೇತಾಂಸ್ತಥೈವ ಭಜಾಮ್ಯಹಮ್ (ಭಗವದ್ಗೀತಾ)

ಯಾರು ನನ್ನನ್ನು ಹೇಗೆ ಆಶ್ರಯಿಸುವರೋ ಹಾಗೆಯೇ ಅವರನ್ನು ಅನುಗ್ರಹಿಸುತ್ತೇನೆ, ಅದಕ್ಕಾಗಿ ಭಕ್ತರ ಭಾವದಂತೆ ನಾನಾ ನಾಮಗಳಿಂದ, ರೂಪಗಳಿಂದ ಉಪಾಸ್ಯನಾಗಿರುವುದು.

ಶಬ್ದಾರ್ಥಗಳು ಪರಮಾತ್ಮ ಶಕ್ತಿಯ ಅಭಿವ್ಯಕ್ತಿಯ ರೂಪ, ಪರಮಾತ್ಮ ಶರೀರಿಯಾದರೆ (ಆತ್ಮ), ಶಬ್ದಾರ್ಥಗಳು ಶರೀರವಾಗಿವೆ, ವರ್ಣಗಳಿಂದ ಶಬ್ದಗಳಾಗಿರುವುದರಿಂದ ಪ್ರತಿಯೊಂದು ವರ್ಣದಲ್ಲಿಯೂ ಶಕ್ತಿಯು ಅಂತರ್ಗತವಾಗಿರುವುದು. ಪ್ರತಿಯೊಂದು ವರ್ಣವೂ ಪರಮಾತ್ಮ ಶಕ್ತಿಯ ಪ್ರತೀಕವಾಗಿದೆ, ವರ್ಣಸಮೂಹವಾದ ನಾಮಗಳೆಲ್ಲ ದೇವತಾಸ್ವರೂಪವೇ ಆಗಿದೆ. ಆದ್ದರಿಂದಲೇ ವೇದಗಳಲ್ಲಿ ದೈವತ್ವವನ್ನು ಕಾಣುವುದು, ನಾಮಪೂಜೆಗೆ ವೈಶಿಷ್ಟ್ಯವಿರುವುದು ಇದರಲ್ಲೆ.

ಉಪಾಸನೆಯಲ್ಲಿ

  1. ದ್ವಾದಶ,
  2. ಅಷ್ಟೋತ್ತರ,
  3. ತ್ರಿಶತಿ ಹಾಗೂ
  4. ಸಹಸ್ರನಾಮ ಪೂಜೆಗಳು ಮಹತ್ವವನ್ನು ಪಡೆದಿವೆ.

ಮಾನವನು ಪರತತ್ತ್ವವನ್ನು ರೂಪಗುಣಗಳಿಂದ ಕೂಡಿದುದಾಗಿ ಉಪಾಸಿಸಬೇಕಾದರೆ ಮಾತೃಭಾವಕ್ಕಿಂತ ಉದಾತ್ತವೂ ಉದಾರವೂ ಹೃದಯಂಗಮವೂ ಆದ ಬೇರೆ ಇನ್ನಾವ ಕಲ್ಪನೆಯಿರುವುದು? ಆದಕಾರಣ ಯೋಗಿಗಳೂ ಉಪಾಸಕರೂ ಮಾತೃಭಾವದಿಂದಲೇ ಪರಮಾತ್ಮನನ್ನು ಕಾಣುತ್ತಾರೆ. ಆ ಮಾತೃಭಾವವೇ ಶ್ರೀಮಾತಾ ಶ್ರೀ ಮಹಾರಾಜ್ಞಿಯೆಂದು, ಲಲಿತಾಂಬೆಯೆಂದು ಉಪಾಸಿಸುತ್ತಾರೆ.

Share on:

City Information

(Private)