Date: 18 Jan 2025 booked.net English
Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ |
Home » ಜ್ಯೋತಿಷ್ಯ » ಜ್ಯೋತಿಷ್ಯ-

ಆಷಾಢ ಮಾಸ ಶುಭವೋ ಅಶುಭವೋ ? ಆಧ್ಯಾತಿಕ ಚಿಂತಕರು ಹಾಗೂ ಪುರೋಹಿತರಾದ ವೇದಬ್ರಹ್ಮ ಶ್ರೀ ಗಣೇಶ್ ಭಟ್ ರವರ ಪ್ರಕಾರ ವಿವರಣೆ ಕೊಟ್ಟಿದ್ದಾರೆ.


01 Jul 2020
  • ಆಷಾಢ ಮಾಸ ಅಶುಭ ಎಂದು ಯಾವ ಶಾಸ್ತ್ರದಲ್ಲೂ ಉಲ್ಲೇಖವಿಲ್ಲ. ಬಹುತೇಕ ಹಿಂದೂಗಳಲ್ಲಿ ಆಷಾಢ ಮಾಸ ಅಶುಭ ಮಾಸ ಎಂಬ ಕಲ್ಪನೆ ಬೇರೂರಿ ಬಿಟ್ಟಿದೆ.
  • ಈ ಮಾಸದಲ್ಲಿ ಯಾವುದೇ ಶುಭಕರ ಕೆಲಸಗಳನ್ನು ಮಾಡಿದರೂ ಅವು ಫಲ ನೀಡುವುದಿಲ್ಲ ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳಿಗೆ ಮನ್ನಣೆ ಇಲ್ಲ. ಆದರೆ ಒಂದು ಮಾತು ಆಷಾಢ ಮಾಸ ಅಶುಭ ಮಾಸ ಎಂದು ಯಾವ ಶಾಸ್ತ್ರಗಳಲ್ಲೂ ಉಲ್ಲೇಖಿಸಿಲ್ಲ.
  • ಆಷಾಢ ಮಾಸ ಪ್ರಾರಂಭವಾದ ನಂತರ ಶುಭ ಕಾರ್ಯಗಳಾದ ಮದುವೆಯ ಮಾತುಕತೆ, ಮದುವೆ, ಗೃಹಪ್ರವೇಶ, ಉಪನಯನ, ವಾಹನ ಮತ್ತು ಜಮೀನು ಕೊಳ್ಳುವುದು, ಹೊಸ ವ್ಯಾಪಾರ ಪ್ರಾರಂಭ ಮುಂತಾದ ಕಾರ್ಯಗಳೆಲ್ಲಾ ನಿಷೇಧವಾಗುವುದು.
  • ಇದಕ್ಕೆ ಮುಖ್ಯವಾಗಿ ಕಾರಣ ನೂರಾರು. ವರ್ಷಗಳ ಹಿಂದೆ ಆಷಾಢ ಮಾಸದಲ್ಲಿ ಮಳೆಯ ಆರ್ಭಟ ಹೆಚ್ಚಿರುತ್ತಿತ್ತು. ಮನೆಯಿಂದ ಹೊರಗೆ ಹೋಗುವುದೇ ಬಹಳ ಕಷ್ಟಕರವಾಗಿರುತ್ತಿತ್ತು. ಈ ರೀತಿ ನಿರಂತರವಾದ ಮಳೆ, ಗಾಳಿಯಿಂದ ಸಂಚಾರಕ್ಕೆ ಅಡೆತಡೆ ಉಂಟಾಗುತ್ತಿತ್ತು.
  • ಈ ಎಲ್ಲಾ ಕಾರಣಗಳಿಂದ ಹೊರಗಿನ ಕೆಲಸಗಳು ಕುಂಟಿತವಾಗುತ್ತಿದ್ದವು. ಹಾಗೂ ರೈತರಿಗೆ ಹೊಲ ಗದ್ದೆಗಳಲ್ಲಿ ವಿಪರೀತ ಕೆಲಸ ಕಾರ್ಯಗಳು ಇರುತ್ತಿತ್ತು. ಈ ಕಾರಣಗಳಿಂದ ಬೇರೆ ವ್ಯವಹಾರಕ್ಕೆ ಸಮಯವೇ ಸಿಗುತ್ತಿರಲಿಲ್ಲ.
  • ಈ ಎಲ್ಲಾ ಕಾರಣಗಳಿಂದ ಆಷಾಢ ಮಾಸದಲ್ಲಿ ಶುಭ ಕಾರ್ಯ ಮಾಡಲು ಅನಾನುಕೂಲವಾಗಿದ್ದರಿಂದ ಶುಭಕಾರ್ಯ ಮಾಡುವುದನ್ನು ನಿಷೇಧಿಸಿದ್ದರು.
  • ಮದುವೆಯಾದ ಹೊಸ ವರ್ಷದಲ್ಲಿ ಅತ್ತೆ-ಸೊಸೆ ಆಷಾಢ ಮಾಸದಲ್ಲಿ ಕೂಡಿ ಒಂದೇ ಮನೆಯಲ್ಲಿ ವಾಸಿಸುವುದು ನಿಷೇಧ ಎಂದು ಕೆಲವು ಕಡೆ ಪದ್ಧತಿ ಇದೆ.
  • ಆಷಾಢದಲ್ಲಿ ಮಳೆ ಹೆಚ್ಚು ಇರುವುದರಿಂದ ಹೊಲ ಗದ್ದೆಗಳಲ್ಲಿ ಮತ್ತು ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಕೆಲಸ ಕಾರ್ಯಗಳು ಹೆಚ್ಚಿರುತ್ತವೆ. ಅತ್ತೆಯಾದವರು ಸೊಸೆಗೆ ಹೆಚ್ಚು ಕೆಲಸದ ಒತ್ತಡ ತರಬಹುದು, ಇದರಿಂದ ಅವರಿಬ್ಬರಲ್ಲಿ ವೈಮನಸ್ಸುವುಂಟಾಗಿ ಜಗಳಕ್ಕೆ ಕಾರಣ ಆಗಬಹುದು ಎಂದು ಒಂದು ತಿಂಗಳ ಕಾಲ ತವರು ಮನೆಗೆ ಕಳಿಸುವ ಸಂಪ್ರದಾಯ ಬಂದಿರಬೇಕು.
  • ಅಮರನಾಥದ ಹಿಮಲಿಂಗ ದರ್ಶನ ಪ್ರತಿ ವರ್ಷ ಆರಂಭವಾಗುವುದು ಈ ಸಮಯದಲ್ಲೇ. ‌
  • ಪ್ರಥಮ ಏಕಾದಶಿ ವ್ರತ ಬರುವುದು ಆಷಾಢದಲ್ಲಿ.
  • ಶಿವ ಪಾರ್ವತಿಗೆ ಅಮರತ್ವದ ರಹಸ್ಯ ಹೇಳಿರುವುದು, ಗಂಗೆ ಭೂಮಿಗೆ ಉತ್ತರಾಭಿಮುಖವಾಗಿ ಹರಿದು ಬಂದಿದ್ದು ಇದೇ ಮಾಸದಲ್ಲಿ.
  • ಮಹಾ ಪತಿವ್ರತೆ ಅನುಸೂಯಾ ದೇವಿ ನಾಲ್ಕು ಸೋಮವಾರ ಶಿವ ವ್ರತ ಮಾಡಿದ್ದು ಇದೇ ಆಷಾಢದಲ್ಲಿ ಮಾಸದಲ್ಲಿ. ‌ ❇ ಆಷಾಢದ ಶುಕ್ರವಾರಗಳಲ್ಲಿ ಲಕ್ಷ್ಮಿ ಪೂಜೆಯನ್ನು ವಿಶೇಷವಾಗಿ ಆಚರಿಸುವರು.
  • ಬಲಿ ಚಕ್ರವರ್ತಿ ಶಾಂಡಿಲ್ಯ ವ್ರತ ಪ್ರಾರಂಭ ಮಾಡಿದ ಎಂಬ ಉಲ್ಲೇಖವಿದೆ. ‌
  • ಇಂದ್ರನು ಗೌತಮರಿಂದ ಸಹಸ್ರಾಕ್ಷನಾಗು ಎಂಬ ಶಾಪ ಪಡೆದ ಹಾಗೂ ಅದರ ವಿಮೋಚನೆಗೆ ಆಷಾಢದಲ್ಲಿ ನಾಲ್ಕು ಸೋಮವಾರ ಸೋಮೇಶ್ವರ ಜಯಂತಿ ವ್ರತವನ್ನು ಮಾಡಿ ಶಾಪ ವಿಮೋಚನೆ ಪಡೆದಿರುವುದಾಗಿ ಪುರಾಣಗಳು ಹೇಳುತ್ತವೆ. ‌
  • ಸುಮಂಗಲಿಯರು ದೀರ್ಘ ಕಾಲದ ಮಾಂಗಲ್ಯ ಪಾಪ್ತಿಗಾಗಿ ಆಷಾಢ ಮಾಸದ ಅಮಾವಾಸ್ಯೆಯ ಸಂಜೆ ಜ್ಯೋತಿ ಭೀಮೇಶ್ವರ ವ್ರತವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ.
  • ಆಷಾಢ ಹುಣ್ಣಿಮೆ ದಿನ ಗುರು ಪೂರ್ಣಿಮೆಯನ್ನು ಎಲ್ಲಾ ಮಠ ಮಂದಿರಗಳಲ್ಲಿ ಆಚರಿಸಿ ಚಾತುರ್ಮಾಸ್ಯ ವ್ರತವನ್ನು ಪ್ರಾರಂಭ ಮಾಡುತ್ತಾರೆ. ‌
  • ಆಷಾಢದ ಶುಕ್ಲ ಪಕ್ಷದ ಪಂಚಮಿ ದಿನದಂದು ಅಮೃತ ಲಕ್ಷ್ಮೀ ವ್ರತವನ್ನು ಮಹಿಳೆಯರು ಭಕ್ತಿಯಿಂದ ಆಚರಿಸುತ್ತಾರೆ. ಈ ಎಲ್ಲಾ ಮಹತ್ವಗಳು ಆಷಾಢ ಮಾಸದಲ್ಲಿ ಇರುವುದರಿಂದ ಈ ಮಾಸವೂ ಸಹ ವಿಶೇಷವೇ ಆಗಿದೆ. ‌
  • ಇನ್ನೊಂದು ವಿಶೇಷ ಎಂದರೆ ಮೈಸೂರಿನ ಚಾಮುಂಡೇಶ್ವರಿ ದೇವಿಯ ಜನ್ಮ ದಿನೋತ್ಸವ ಬರುವುದು ಈ ಆಷಾಢ ಮಾಸದಲ್ಲೇ.
Share on:

City Information

(Private)